ಬೆಂಗಳೂರು: ಬಹುತೇಕ ಹೊಸಬರೇ ಸೇರಿ ನಿರ್ಮಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ವಿವಾದಕ್ಕೆ ಸಂಬಂಧೀಸಿದಂತೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್ಗೆ ಇಂದು ನಟಿ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ.
SBI ATM Franchise: ಈ ದಾಖಲೆಗಳು ಇದ್ರೆ ಸಾಕು.. ಪ್ರತಿ ತಿಂಗಳು 60 ಸಾವಿರ ರೂ.ವರೆಗೆ ಸಂಪಾದಿಸಬಹುದು..!
ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದರು. 1 ಕೋಟಿ ರೂ. ಪರಿಹಾರ ಕೇಳಿ ನಟಿ ಕೋರ್ಟ್ ಮೊರೆ ಹೋಗಿದ್ದರು.
ಇದೀಗ ಪ್ರಕರಣದ ವಿಚಾರಣೆಗೆ ಸಂಬಂಧ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್ಗೆ ರಮ್ಯಾ ಹಾಜರಾಗಿದ್ದಾರೆ. ಇನ್ನೂ 2024ರಲ್ಲಿ ರಿಲೀಸ್ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು.