ಬೆಂಗಳೂರು: ಎಲ್ಲನೂ ಫ್ರೀ ಕೊಟ್ಟರೆ ಸರ್ಕಾರ ನಡೆಸೋದು ಹೇಗೆ? ಇನ್ಮೇಲೆ ಫ್ರೀ ಕೊಡೋಕಾಗೋಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಅಧಿಕಾರಿಗಳು ಜಲಮಂಡಳಿ ಕಚೇರಿಯಲ್ಲಿ ಸಭೆ ನಡೆಸಿದ್ದು, ಈ ವೇಳೆ ಬಿಬಿಎಂಪಿ, ಬಿಡಿಎ, ಜಲಮಂಡಳಿ ಹಾಗೂ ಬಿಎಂಆರ್ ಸಿಎಲ್ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಇನ್ನು ಸಭೆ ಬಳಿಕ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಈಗಾಗಲೇ ಜಲಮಂಡಳಿ ಸಂಸ್ಥೆ ನಷ್ಟದಲ್ಲಿದೆ ಅಂತ ಅಧಿಕಾರಿಗಳು ಹೇಳಿದ್ದು, ದರ ಹೆಚ್ಚು ಮಾಡದಿದ್ದರೆ ಈ ಸಾಲಿನ ಬೇಸಿಗೆ ಕಾಲದಲ್ಲಿ ಸಂಸ್ಥೆಗೆ ಹೊಡೆತ ಬೀಳುತ್ತೆ. ಕಳೆದ ವರ್ಷ ನಗರದಲ್ಲಿ ನೀರಿನ ಅಭಾವ ಹೆಚ್ಚಾಗಿತ್ತು. ಆದರೆ ಈ ಬಾರಿ ಅದೇ ರೀತಿ ಆಗಬಾರದು ಮತ್ತು ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಿದ್ದಾರೆ.
OnePlus Nord 4: 25 ಸಾವಿರಕ್ಕಿಂತಲೂ ಕಡಿಮೆಗೆ ಖರೀದಿಸಿ ಒನ್ ಪ್ಲಸ್ ನಾರ್ಡ್-4..! ಈ ಆಫರ್ ಮಿಸ್ ಮಾಡ್ಬೇಡಿ
ಸರ್ಕಾರಿ ನೌಕರರು ಸಂಬಳ ಜಾಸ್ತಿ ಮಾಡಿ ಅಂತಾರೆ, ವಿದ್ಯುತ್ ಫ್ರೀ, ನೀರು ಫ್ರೀ ಅಂದ್ರೆ ಹೇಗೆ ಒಂದು ಪೈಸೆ ಆದ್ರೂ ಬಿಲ್ ಕಟ್ಟಬೇಕಲ್ವ? ಎಲ್ಲಾ ಸರಿದೂಗಿಸಿಕೊಂಡು ಹೋಗಬೇಕಲ್ವಾ? ಎಲ್ಲನೂ ಫ್ರೀ ಕೊಟ್ಟರೆ ಸರ್ಕಾರ ನಡೆಸೋದು ಹೇಗೆ? ಇನ್ಮೇಲೆ ಫ್ರೀ ಕೊಡೋಕಾಗೋಲ್ಲ. ಶೀಘ್ರವೇ ನೀರಿನ ದರ ಏರಿಕೆ ಮಾಡೋಕೆ ಸೂಚಿಸಲಾಗಿದೆ ಎಂದರು.
2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದರಿಂದ ತಿಂಗಳಿಗೆ 85 ಕೋಟಿಯಂತೆ ವರ್ಷಕ್ಕೆ 1 ಸಾವಿರ ಕೋಟಿ ಸಂಸ್ಥೆ ನಷ್ಟ ಎದುರಿಸುತ್ತಿದೆ. ಹೀಗಾಗಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಶೀಘ್ರವೇ ನೀರಿನ ದರ ಏರಿಕೆ ಮಾಡುತ್ತೇನೆ, ಜಲಮಂಡಳಿ ಉಳಿಬೇಕು ಅಂದ್ರೆ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.