ಬೆಂಗಳೂರು:- ಜಾತಿ ಗಣತಿ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜಾತಿ ಗಣತಿ ವರದಿಯಲ್ಲಿ ಏನಿದೆ ಎಂಬುದು ತಮಗೆ ಗೊತ್ತಿಲ್ಲ. ಜಾತಿ ಗಣತಿ ವರದಿ ಇನ್ನು ಬಂದಿಲ್ಲ. ಸುಮ್ಮನೆ ನೀರಿನೊಳಗೆ ಎಮ್ಮೆ ನಿಲ್ಲಿಸಿ ಹಾಲು ಕರೆದಂತೆ ಎಂದ ಅವರು ಅದು ಕೋಣಾನೋ, ಎಮ್ಮೆನೋ ಯಾರಿಗೆ ಗೊತ್ತು ಎಂದರು. ವರದಿ ಬಂದ ಬಳಿಕ ಈ ಬಗ್ಗೆ ಚರ್ಚೆಯಾಗುತ್ತದೆ ಎಂದ ಅವರು ಬಿಹಾರದಲ್ಲಿ ವರದಿ ಬಿಡುಗಡೆಯಾಗಿದೆ. ಆಕಾಶ ಬಿದ್ದು ಹೋಯ್ತಾ ಎಂದು ಪ್ರಶ್ನಿಸಿದರು. ಇನ್ನು ವರದಿ ಬಂದಿಲ್ಲ, ಹೀಗಾಗಿ ಸುಮ್ಮನೆ ಊಹಾಪೋಹಗಳ ಮೇಲೆ ಪ್ರಶ್ನೆ ಮಾಡುವುದು ಸರಿಯಲ್ಲ ಎಂದರು.
ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ. ವರದಿನೇ ಆಚೆ ಬಂದಿಲ್ಲ, ವರದಿ ಆಚೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ ಎಂದರು.
ವಿ. ಸೋಮಣ್ಣ ಕರೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಸೋಮಣ್ಣ ನಮ್ಮ ಹಳೇ ಸ್ನೇಹಿತ. ನಾನೇ ಕಾಲ್ ಮಾಡಿ ಮಾತನಾಡುತ್ತೇನೆ ಎಂದರು. ಸೋಮಣ್ಣ ಅವರನ್ನು ಕಾಂಗ್ರೆಸ್ ಗೆ ಆಹ್ವಾನ ನೀಡಲಾಗಿದೆ ಎಂಬ ಪ್ರಶ್ನೆಗೆ ಹಿಂದೆ ಅವರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದರು ಎಂದರು