ಮೈಸೂರು : ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ? ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
‘ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಐದು ರೂಪಾಯಿ ಕೊಟ್ಟಿದ್ರಾ? ಆದ್ರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದ್ರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡ್ತೀರಿ’? ಎಂದು ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.