ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹೋಗಿ ಫೋಟೋ ಶೋ ಮಾಡುವುದು ಬಿಟ್ಟರೆ ಬೇರೇನೂ ಕೆಲಸ ಆಗುತ್ತಿಲ್ಲ. ಕಮಿಷನರ್ ಅವರು ಮಳೆಗೆ ಸಂಬಂಧಿಸಿ ಎಲ್ಲ ಮಾಡಿದ್ದಾಗಿ ಒಂದು ತಿಂಗಳ ಹಿಂದೆಯೇ ಹೇಳಿಕೆ ನೀಡಿದ್ದರು. ಪಾಲಿಕೆ ಎಲ್ಲ ಸಿದ್ಧತೆ ಮಾಡಿದ್ದರೆ ಸಿಎಂ ಸ್ಥಳ ಭೇಟಿ ಮಾಡುವ ಪ್ರಮೇಯ ಯಾಕೆ ಬಂತು ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ನಷ್ಟ ಆಗಿದ್ಯಾ? ಹಿಂದೆ ಯಡಿಯೂರಪ್ಪನವರು ಒಂದು ವರ್ಷದಲ್ಲಿ 7 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡಿದ್ದರು. ಬಸವರಾಜ ಬೊಮ್ಮಾಯಿಯವರು 6,700 ಕೋಟಿ ಬಿಡುಗಡೆ ಮಾಡಿದ್ದರು. ಕಾಂಗ್ರೆಸ್ಸಿನ ಯೋಗ್ಯತೆಗೆ ಎಷ್ಟು ಬಿಡುಗಡೆ ಮಾಡಿದ್ದಾರೆಂದು ಹೇಳಲಿ ಎಂದು ಸವಾಲೆಸೆದರು. ರಾಜಕಾಲುವೆ ಸರಿಪಡಿಸಲು, ಲಕ್ಷಾಂತರ ಹೊಂಡ ಗುಂಡಿ ಸರಿಪಡಿಸಲು ಎಷ್ಟು ಹಣ ನೀಡಿದ್ದೀರಿ ಎಂದು ಪ್ರಶ್ನಿಸಿದರು.
500 Note Update: ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್
ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಹಣ ಇಲ್ಲದೆ ಗುತ್ತಿಗೆದಾರರು ಆತ್ಮಹತ್ಯೆಗೆ ಮುಂದಾಗಿದ್ದರು. ಕಮಿಷನ್ ಆಪಾದನೆ ಮಾಡಿದ್ದರು. ಈ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಪಾತ್ರ ಏನು ಎಂದು ಕೇಳಿದರು. ರಾಜ್ಯ ಸರಕಾರ ಎಷ್ಟು ಹಣ ಬಿಡುಗಡೆ ಮಾಡಲಿದೆ? ಯಾವಾಗ ಹೊಂಡದ ಗುಂಡಿ ಮುಚ್ಚುತ್ತೀರಿ ಎಂದ ಅವರು, ಕುಡಿಯುವ ನೀರಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಮರ್ಯಾದೆ ಹರಾಜಾಗಿದೆ ಎಂದು ವಾಗ್ದಾಳಿ ನಡೆಸಿದರು. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎಷ್ಟು ಹಣ ನೀಡಿದ್ದೀರಿ? ಲೆಕ್ಕ ಕೊಡಿ ಕಾಂಗ್ರೆಸ್ಸಿನವರೇ ಎಂದು ಕೇಳಿದರು. ಬಿಲ್ ಸಿಗದೆ ಕಸ ತೆಗೆಯುವವರು ಸಮಸ್ಯೆಯಲ್ಲಿದ್ದಾರೆ. ರಾಶಿ ರಾಶಿ ಕಸ ಬಿದ್ದಿದೆ. ಬೆಂಗಳೂರಿನ ತೆರಿಗೆ ನಮ್ಮ ಹಕ್ಕು ಎಂದು ಇಲ್ಲಿನ ಜನರೂ ಕೇಳುತ್ತಿದ್ದಾರೆ ಎಂದು ತಿಳಿಸಿದರು.