ಹುಬ್ಬಳ್ಳಿ: ‘ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಟ್ರಸ್ಟ್ ವತಿಯಿಂದ ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಕರ್ನಾಟಕ ವಾಣಿಜ್ಯೋದ್ಯಮ. ಸಂಸ್ಥೆಯ ಸಭಾಭವನದಲ್ಲಿ ಡಿಸೆಂಬರ್ 7ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ’ ಎಂದು ವೇದಿಕೆ ಅಧ್ಯಕ್ಷ ಎಂ.ಎ. ಸುಬ್ರಹ್ಮಣ್ಯ ತಿಳಿಸಿದರು.
‘ಹೆಬಸೂರ ರಮಜಾನ್(ಮಂಜಿನೊಳಗಣ ಕೆಂಡ), ನಿರ್ಮಲಾ ಶೆಟ್ಟರ(ಸರಹದ್ದುಗಳಿಲ್ಲದ ಭೂಮಿಯ ಕನಸು, ಶ್ವೇತಾ ನರಗುಂದ(ಮನಮದ್ದಳೆಯ ಸ್ವಗತ) ಮತ್ತು ಶಿವಾನಂದ ಕುಬಸದ(ಎಂಟು ಬಣ್ಣದ ಕೌದಿ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿರಲಿದೆ. ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
PM Awas Yojana: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ನೋಡಿ ಮಾಹಿತಿ
‘ಹಿರಿಯ ಕವಿ ಬಿ.ಆರ್. ಲಕ್ಷ್ಮಣರಾವ್ ಅಧ್ಯಕ್ಷತೆವಹಿಸಲಿದ್ದು, ಸಾಹಿತಿ ಜೋಗಿ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾರಣಾಂತರಗಳಿಂದ ಕಳೆದ ನಾಲ್ಕು ವರ್ಷಗಳಿಂದ ಕಾವ್ಯ ಪ್ರಶಸ್ತಿ ಪ್ರದಾನ ಮಾಡಿರಲಿಲ್ಲ’ ಎಂದರು. ವೇದಿಕೆ ಉಪಾಧ್ಯಕ್ಷ ಬಿ.ಎಸ್. ಮಾಳವಾಡ ಇದ್ದರು.