ಹುಬ್ಬಳ್ಳಿ; ನಗರದಗ್ಲೋಬಲ್ ಮೀಡಿಯಾದ 2025 ರ ತುಳುನಾಡು ಪಂಚಾಂಗ ಕ್ಯಾಲೆಂಡರ್ ನ್ನು ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು.
ಕರ್ನಾಟಕ ರಾಜ್ಯದ ತುಳುನಾಡು ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರವಾಗಿದ್ದು ಅನೇಕ ಇತಿಹಾಸ ಪ್ರಸಿದ್ಧ ಪೌರಾಣಿಕ ಶ್ರದ್ಧಾಕೇಂದ್ರಗಳಾಗಿದೆ. 2025ರ ಕ್ಯಾಲೆಂಡರನ್ನು ಗಣಪತಿ ದೇವಸ್ಥಾನಗಳಾದ ಶ್ರೀ ಶರವು ಮಹಾಗಣಪತಿ ದೇವಸ್ಥಾನ ಮಂಗಳೂರು, ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ, ಉಡುಪಿ, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿ ಉಡುಪಿ, ಪಿಲಾರುಖಾನ್ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಉಡುಪಿ, ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ- ಕಾಟಿಪಳ್ಳ, ಮಂಗಳೂರು,
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಧರ್ಮಸ್ಥಳ, ಪರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಉಡುಪಿ, ಶ್ರೀ ಮಹಾಗಣಪತಿ ದೇವಸ್ಥಾನ ಸೋಮೇಶ್ವರ ಉಡುಪಿ, ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಉದ್ಯಾವರ, ಉಡುಪಿ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾತಿ, ಉಡುಪಿ, ಮಹತೋಭಾರ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಉಳ್ಳೂರು, ಶ್ರೀ ಮಹಾಗಣಪತಿ ದೇವಸ್ಥಾನ ಆಳದಂಗಡಿ, ದಕ್ಷಿಣ ಕನ್ನಡ ಇವುಗಳ ಮೂಲ ವಿಗ್ರಹದ ಅಲಂಕಾರವುಳ್ಳ ನೈಜ ಚಿತ್ರಣವನ್ನು ಹೊಂದಿದೆ.
ಈ ವಿಶೇಷ ಕ್ಯಾಲೆಂಡರ್ಗಳಿಗೆ ರಾಜ್ಯ ಹಾಗೂ ವಿದೇಶಗಳಲ್ಲಿ ಬೇಡಿಕೆ ಇದೆ.
ಬಿಡುಗಡೆಯ ಸಂದರ್ಭದಲ್ಲಿ ಎಸ್ಡಿಎಂ ಸೊಸೈಟಿಯ ಸೆಕ್ರೆಟರಿ ಜೀವನಧರ ಕುಮಾರ, ಉದ್ಯಮಿ ಸತೀಶ ಡಿ. ಶೆಟ್ಟಿ, ಮತ್ತು ಗ್ಲೋಬಲ್ ಮೀಡಿಯಾದ ಸತೀಶರಾವ್ ಮತ್ತು ಶ
ದಿನೇಶ ಶೆಟ್ಟಿ ಉಪಸ್ಥಿತರಿದ್ದರು.