ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಗುರಿಗೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್, ಬಡವರು, ಯುವಕರು, ರೈತರು, ಮಹಿಳೆಯರು ಹಾಗೂ ಮಧ್ಯಮ ವರ್ಗದ ಜನರನ್ನು ಕೇಂದ್ರೀಕರಿಸಿದ್ದು, ಮುಂದಿನ ಐದು ವರ್ಷದ ಅಭಿವೃದ್ಧಿಗೆ ನೀಲನಕ್ಷೆ ಹಾಕಿದಂತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಕ್ರಾಂತಿಕಿರಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಿ – ಶಾಸಕ ಗಣಿಗ ರವಿಕುಮಾರ್
ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ನಡುವೆ ಸಮರ್ಪಕ ಸಮತೋಲನ ಸಾಧಿಸಿದಂತಿರುವ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು, ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಆರಂಭ, ಜೀವ ರಕ್ಷಕ ಔಷಧಿಗಳ ಮೇಲೆ ತೆರಿಗೆ ವಿನಾಯಿತಿ, ವೈದ್ಯಕೀಯ ಉಪಕರಣಗಳ ದರ ಇಳಿಕೆ ಸೇರಿದಂತೆ ಮುಂದಿನ 5 ವರ್ಷಗಳಲ್ಲಿ 75 ಸಾವಿರ ವೈದ್ಯಕೀಯ ಸೀಟುಗಳ ಹೆಚ್ಚಳ ಘೋಷಣೆ ಮಾಡಿದ್ದು, ದೇಶದ ವೈದ್ಯಕೀಯ ಕ್ಷೇತ್ರ ಹಾಗೂ ಜನರ ಆರೋಗ್ಯ ಸುಧಾರಣೆಗೆ ಮೋದಿ ಸರ್ಕಾರ ಕೈಗೊಂಡ ಪ್ರಮುಖ ಹೆಜ್ಜೆಯಾಗಿದೆ.
ಮಧ್ಯಮ ವರ್ಗದ ನಿರೀಕ್ಷೆಗೆ ಸ್ಪಂದಿಸಿರುವ ಮೋದಿ ಸರ್ಕಾರ 7 ಲಕ್ಷ ರೂಪಾಯಿವರೆಗೆ ಇದ್ದ ತೆರಿಗೆ ವಿನಾಯಿತಿಯನ್ನು ಇದೀಗ 12 ಲಕ್ಷ ರೂಪಾಯಿಗೆ ಏರಿಕೆ ಮಾಡುವ ಮೂಲಕ ಕೋಟ್ಯಂತರ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಮೂಲಕ ಮಧ್ಯಮ ವರ್ಗದ ಆಶೋತ್ತರಗಳಿಗೆ ಈ ಬಜೆಟ್ ಹಿಡಿದ ಕನ್ನಡಿಯಾಗಿದೆ ಎಂದು ಅವರು ತಿಳಿಸಿದ್ದಾರೆ.