ಹುಬ್ಬಳ್ಳಿ:- ಅಪರಿಚಿತ ವ್ಯಕ್ತಿಯೋರ್ವನ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಕಿಮ್ಸ ಹಿಂಭಾಗದಲ್ಲಿ ಜರುಗಿದೆ.
ಕಳೆದ ಐದಾರು ತಿಂಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಸಿಪಿ ಹಾಗೂ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಬೆಳಕಿಗೆ ಬರಲಿದೆ.