ಹುಬ್ಬಳ್ಳಿ : ಬಸ್ನಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್ ಕಳವು ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ತಾಲ್ಲೂಕಿನ ಛಬ್ಬಿ ಗ್ರಾಮದ ಮಹಾದೇವಿ ವಡ್ಡರ್ ಬಂಧಿತ ಆರೋಪಿ. ₹2 ಲಕ್ಷ ಮೌಲ್ಯದ ಚಿನ್ನಾಭರಣ, ₹7,000 ನಗದು, ಮೊಬೈಲ್ಫೋನ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಚೆಗೆ ಶಿರಸಿಯಿಂದ ಧಾರವಾಡಕ್ಕೆ ಹೋಗುತ್ತಿದ್ದ ಬಸ್ನಲ್ಲಿ ಕಳವು ನಡೆದ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪತ್ತೆಗೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.