ಹುಬ್ಬಳ್ಳಿ: ಇಲ್ಲಿಯ ಚಿಟಗುಪ್ಪಿ ಆಸ್ಪತ್ರೆಗೆ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹಾಗೂ ಮಹಾಪೌರ ವೀಣಾ ಬಾರದ್ವಾಡ ಅವರು ಭೇಟಿ ನೀಡಿ, ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಿದರು.
ಮುಖ್ಯ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ, ಕೋವಿಡ್ ಪರೀಕ್ಷೆ ಹಾಗೂ ಔಷಧ ದಾಸ್ತುನಗಳ ಬಗ್ಗೆ ವಿವರಿಸಿದರು. ಜಿಂಗಲ್ಸ್ ಮೂಲಕ ಸಾರ್ವಜನಿಕರಿಗೆ ಮುಂಜಾಗ್ರತೆ ತೆಗೆದುಕೊಳ್ಳಲು ಮಾಹಿತಿ ನೀಡಲಾಗುತ್ತಿದೆ ಎಂದರು.
ಪಾಲಿಕೆ ಸದಸ್ಯೆ ಸುನಿತಾ ಮಾಳವದಕರ, ಪ್ರದೀಪ, ಹೇಮಂತ, ಮಹಾಂತೇಶ ಇತರರು ಇದ್ದರು.