.ಹುಬ್ಬಳ್ಳಿ : ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಲಾದಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಹೇಳಿದರು.
ಬೂತ್ ಮಟ್ಟದಲ್ಲಿ ಸಂವಿಧಾನದ ಸನ್ಮಾನ ಅಭಿಯಾನ ನಡೆಸಲು ಬಿಜೆಪಿ ನಿರ್ಧಾರ: ಶಾಸಕ ಎಂ.ಆರ್. ಪಾಟೀಲ
ನೈಋತ್ಯ ರೈಲ್ವೆ ವಲಯದ ಇಲ್ಲಿನ ಮುಖ್ಯ ಕಚೇರಿ ರೈಲ್ ಸೌಧದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನದ ಮುನ್ನಡಿ ಓದಿದ ಅರವಿಂದ ಶ್ರೀವಾಸ್ತವ, ಸಂವಿಧಾನದ ಸಂಸ್ಥಾಪಕರ ಕಲ್ಪನೆಯಂತೆ ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್ ಮತ್ತು ಇತರ ಪ್ರಧಾನ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿತರಿಸಲಾಯಿಯಿತು.
ಸಂವಿಧಾನದ ಅಂಗೀಕಾರದ ಸಂದರ್ಭದಲ್ಲಿ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಮ್ಮ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೀಠಿಕೆಯನ್ನು ಓದಿದರು. ಹುಬ್ಬಳ್ಳಿ ಮತ್ತು ಮೈಸೂರು ಕಾರ್ಯುಗಾರಗಳು ಸೇರಿದಂತೆ ಇತರ ಕಚೇರಿಗಳಲ್ಲಿಯೂ ಸಂವಿಧಾನದ ಪೀಠಿಕೆಯನ್ನು ಓದಲಾಯಿತು.