ಹುಬ್ಬಳ್ಳಿ:- ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಇತ್ತೀಚೆಗೆ ಸಂಭವಿಸಿದ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಿಂದ ಹಲವರು ಗಂಭೀರ ಗಾಯಗೊಂಡಿದ್ದರು. ಅಲ್ಲದೇ ನಿನ್ನೆ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗುರುವಾರ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದರು. ಇಂದು ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವಿಗೀಡಾಗಿದ್ದಾರೆ.
58 ವರ್ಷದ ನಿಜಲಿಂಗಪ್ಪ ಬೇಪುರಿ, 18 ವರ್ಷದ ಸಂಜಯ್ ಸವದತ್ತಿ, 16 ವರ್ಷದ ರಾಜು ಮೂಗೇರಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಲಾಧಾರಿಗಳು ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಅಯ್ಯಪ್ಪನ ಮಾಲೆಯನ್ನು ತಗೆದಿದ್ದಾರೆ.