ಹುಬ್ಬಳ್ಳಿ; ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ ಘಟನೆ ಜರುಗಿದೆ.
BBK11: ಈ ವಾರದ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಯಾರಿಗೆ? ಭಾವುಕರಾದ ಸ್ಪರ್ಧಿ!
29 ವರ್ಷದ ಶಂಕರ್ ಚವ್ಹಾಣ್ ಮೃತ ದುರ್ದೈವಿ. ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಶಂಕರ್ ಚವ್ಹಾಣ್, ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ 13 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಶಂಕರ್ ಚವ್ಹಾಣ್ ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಆರೈಕೆಯಲ್ಲಿ ಬೆಳೆದಿದ್ದರು. ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀರ್ವವಾಗಿ ಗಾಯಗೊಂಡಿದ್ದರು.
ಶಂಕರ್ ಚವ್ಹಾಣ್ಗೆ ಕಳೆದ ಏಳು ದಿನಗಳಿಂದ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಚವ್ಹಾಣ್ ಶನಿವಾರ ಮಧ್ಯರಾತ್ರಿ ಕೊನೆಯುಸಿರು ಎಳೆದಿದ್ದಾರೆ. ಶವಗಾರಾದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.