ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ.
ಮುಂದುವರಿದ ಬಾಣಂತಿಯರ ಸಾವು: ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು!
ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 ವರ್ಷದ ಹಿಂದೆ ನಿರ್ಮಿಸಿದ್ದ ಅಯ್ಯಪ್ಪ ಸನ್ನಿಧಿ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ.
ನಗರದ ಅಚ್ಚವ್ವನ ಕಾಲೋನಿಯಲ್ಲಿ 22 ವರ್ಷದ ಹಿಂದೆ ಅಯ್ಯಪ್ಪ ಸನ್ನಿಧಿ ನಿರ್ಮಿಸಲಾಗಿತ್ತು. ಗಜಾನನ ಜಿತೂರಿ ಸ್ವಾಮೀಜಿ ಅವರು ಈ ಸನ್ನಿಧಿ ನಿರ್ಮಿಸಿದ್ದರು. ಇದೀಗ ಘಟನೆಯಿಂದ ಮನನೊಂದಿರುವ ಗಜಾನನ ಜಿತೂರಿ ಸ್ವಾಮೀಜಿ, ಅಯ್ಯಪ್ಪ ಸ್ವಾಮಿ ಸನ್ನಿಧಿ ನೆಲಸಮ ಮಾಡಲು ನಿರ್ಧರಿಸಿದ್ದಾರೆ.