ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಚಿಕಿತ್ಸೆ ಫಲಿಸದೇ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದು, ಉಳಿದವರು ಇಬ್ಬರು ಮಾತ್ರ ಎನ್ನಲಾಗಿದೆ.
ಮೃತಪಟ್ಟವರ ಸಂಖ್ಯೆ 7ಕ್ಕೇರಿಕೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತೇಜಸ್ ಸತಾರೆ ಕೊನೆಯುಸಿರೆಳೆದಿದ್ದಾರೆ. ಒಬ್ಬನೇ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಒಬ್ಬನೇ ಮಗನಾಗಿದ್ದ ತೇಜಸ್ನನ್ನು ಕಳೆದುಕೊಂಡು ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್ ಆಗಿ ತೇಜಸ್ ತಂದೆ ಮುರಳಿಯವರು ಕೆಲಸ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ತೇಜಸ್ ಮಾಲೆ ಧರಿಸುತ್ತಿದ್ದರು. ಪುಣೆಯಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಬಂದಿದ್ದರು. ತೇಜಸ್ ಹೋಟೆಲ್ ಮಾಡುವ ಕನಸು ಕಂಡಿದ್ದ. ಆ ಕನಸು ನನಸಾಗಿಯೇ ಉಳಿಯಿತು ಎಂದು ನೋವು ತೋಡಿ ಕೊಂಡಿದ್ದಾರೆ.