ಹುಬ್ಬಳ್ಳಿ: ಇಲ್ಲಿನ ಕಿಮ್ಸ್ಗೆ ಪ್ರಭಾರಿ ನಿರ್ದೇಶಕರಾಗಿ ಡಾ. ಎಸ್. ಎಫ್. ಕಮ್ಮಾರ ಅವರು ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದರು. ಡಿ. 6ರಂದೇ ನಿರ್ದೇಶಕರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲುಬು ಮತ್ತು ಕೀಲು ವಿಭಾಗದ ಪ್ರಾಧ್ಯಾಪಕ ಹಾಗೂ ಪಿಎಂಆರ್ ಮುಖ್ಯಸ್ಥ ಡಾ. ಕಮ್ಮಾರ ಅವರನ್ನು ಸರ್ಕಾರ ನೇಮಕ ಮಾಡಿದೆ. ಕಾಯಂ ನಿರ್ದೇಶಕರ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಅವರು ಮುಂದುವರಿಯಲಿದ್ದಾರೆ.
ನಿಗರ್ಮಿತ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಸೇವೆಯು ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದೆ. ಎಂಎಸ್ ನೇಮಕ: ಇಲ್ಲಿನ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವೈದ್ಯಕೀಯ ಅಧೀಕ್ಷಕರಾಗಿ ಮಕ್ಕಳ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಎಸ್. ರಾಜಾಶಂಕರ ಅವರು ನೇಮಕವಾಗಿದ್ದು, ಅವರೂ ಕೂಡ ಗುರುವಾರ ಆದೇಶ ಪ್ರತಿ ಸ್ವೀಕರಿಸಿ ಹುದ್ದೆ ಅಲಂಕರಿಸಿದರು. ಈ ವೇಳೆ ನೇಮಕವಾದ ಇಬ್ಬರಿಗೂ ಹಾಗೂ ನಿರ್ಗಮಿತ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೂ ವೈದ್ಯಕೀಯ ಸಿಬ್ಬಂದಿ ಹೂಗುಚ್ಛ ನೀಡಿ ಶುಭಕೋರಿದರು.
ವೈದ್ಯಕೀಯ ಅಧೀಕ್ಷಕ ಡಾ. ಸಿ. ಅರುಣಕುಮಾರ, ಪ್ರಾಚಾರ್ಯ ಡಾ. ಈಶ್ವರ ಹೊಸಮನಿ, ಡಾ.ಜಿ.ಸಿ. ಪಾಟೀಲ, ಡಾ.ಕೆ.ಎಫ್. ಕಮ್ಮಾರ, ಡಾ.ಎಸ್.ಎಸ್. ಶಿರೋಳ, ಡಾ. ರವೀಂದ್ರ ಗದಗ, ಡಾ. ಲಕ್ಷ್ಮೀಕಾಂತ ಲೋಕರೆ, ಡಾ. ರಾಜಶೇಖರ ದ್ಯಾಬೇರಿ ಸಿಬ್ಬಂದಿ ವರ್ಗದವರು ಇದ್ದರು.