ಬೆಂಗಳೂರು: ಹುಬ್ಬಳ್ಳಿ (Hubballi) ಇನ್ಸ್ಪೆಕ್ಟರ್ನನ್ನು (Inspector) ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಬಿಜೆಪಿಗೆ (BJP) ತಿರುಗೇಟು ನೀಡಿದ್ದಾರೆ.
ಜನವರಿ 9ರ ಒಳಗೆ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಬೇಕು, ಹುಬ್ಬಳ್ಳಿ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಬೇಕು ಎಂಬ ಬಿಜೆಪಿ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಲ್ಲ. ಇನ್ಸ್ಪೆಕ್ಟರ್ನನ್ನು ಯಾಕೆ ಅಮಾನತು ಮಾಡಬೇಕು? ಅವನೇನು ತಪ್ಪು ಮಾಡಿದ್ದಾನೆ ಎಂದು ಪ್ರಶ್ನಿಸಿದರು.
https://ainlivenews.com/legal-action-if-a-criminal-impersonates-a-rama-bhakta-dinesh-gundurao/
ಬಿಜೆಪಿ ಅವರು ಪ್ರತಿಭಟನೆ ಮಾಡಲಿ. ಕಾನೂನು ಈ ದೇಶದಲ್ಲಿ ಇರಬಾರದು ಎಂದು ಬಿಜೆಪಿಗೆ ಇದ್ದರೆ ಪ್ರತಿಭಟನೆ ಮಾಡಲಿ. ರಾಜ್ಯದಲ್ಲಿ ಕಾನೂನು ಕಾಪಾಡೋದು ನಮ್ಮ ಕರ್ತವ್ಯ. ಕಾನೂನಿನ ಪ್ರಕಾರ ಹುಬ್ಬಳ್ಳಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಅವರ ಬಂಧನ ಟೈಂನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗುತ್ತಿದೆ ಅನ್ನೋದು ಬಿಟ್ಟರೆ ಪೊಲೀಸರು ಕಾನೂನು ವಿರುದ್ಧ ಏನು ಕೆಲಸ ಮಾಡಿಲ್ಲ. ಬಿಜೆಪಿ ಅವರು ಅನಾವಶ್ಯಕವಾಗಿ ಇದನ್ನು ದೊಡ್ಡ ರಾಜಕೀಯ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯವನ್ನು ನಾವು ಸಹಿಸಲು ಸಾಧ್ಯವಿಲ್ಲ. ಬಿಜೆಪಿ ಅವರು ಪ್ರತಿಭಟನೆ ಮಾಡಲಿ. ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು