ಅತೀ ಅಗ್ಗದ ಬೆಲೆಗೆ ಸ್ಮಾರ್ಟ್ಫೋನ್ ಬೇಕಿದ್ರೆ, ಈ ಆಫರ್ ಗಮನಿಸಬಹುದು. ಟೆಕ್ನೋ ಸಂಸ್ಥೆಯ ಪ್ರಮುಖ ಫೋನ್ಗಳಲ್ಲಿ ಒಂದಾಗಿರುವ ಟೆಕ್ನೋ ಪಾಪ್ 7 ಪ್ರೊ ಫೋನ್ ಅಮೆಜಾನ್ ತಾಣದಲ್ಲಿ ಈಗ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್ಫೋನ್ ಬಿಗ್ ಬ್ಯಾಟರಿ ಸೌಲಭ್ಯ ಪಡೆದಿದೆ.
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್ಫೋನ್ ಅಮೆಜಾನ್ ಪ್ಲಾಟ್ಫಾರ್ಮ್ ನಲ್ಲಿ ಶೇ. 29% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 64GB + 2GB RAM ಸ್ಟೋರೇಜ್ ವೇರಿಯಂಟ್ 5,699ರೂ. ಗಳ ಪ್ರೈಸ್ಟ್ಯಾಗ್ ನಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್ ಅಥವಾ ಇತರೆ ರಿಯಾಯಿತಿಗಳ ಅನುಕೂಲ ಲಭ್ಯ.
ಅಂದಹಾಗೆ ಈ ಸ್ಮಾರ್ಟ್ಫೋನ್ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಅವುಗಳು ಕ್ರಮವಾಗಿ ಎಂಡ್ಲೆಸ್ ಬ್ಲ್ಯಾಕ್ ಮತ್ತು ಯುಯುನಿ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಓಬೈಎಲ್, ಕ್ವಾಡ್ಕೋರ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ.
ಅಂದಾಹಾಗೆ ಈ ಸ್ಮಾರ್ಟ್ಫೋನ್ 5,000mAh ಬ್ಯಾಟರಿ ಬ್ಯಾಕ್ಅಪ್ ಅನ್ನು ಹೊಂದಿದ್ದು, 29 ದಿನಗಳ ಸ್ಟ್ಯಾಂಡ್ ಬೈ ಟೈಂ ಅನ್ನು ನೀಡಲಿದೆ. ಹಾಗಾದ್ರೆ ಈ ಸ್ಮಾರ್ಟ್ಫೋನಿನ ಇತರೆ ಫೀಚರ್ಸ್ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್ಫೋನ್ 6.56 ಇಂಚಿನ HD+ ಡಾಟ್ ನಾಚ್ IPS ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇದು 480 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ನೀಡಲಿದೆ. ಇನ್ನು ಡಿಸ್ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್, 90% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಟೆಕ್ನೋ ಪಾಪ್ 7 ಪ್ರೊ ಮೊಬೈಲ್ ಕ್ವಾಡ್ಕೋರ್ ಮೀಡಿಯಾ ಟೆಕ್ ಹಿಲಿಯೋ A22 SoC ಪ್ರೊಸೆಸರ್ ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 12 ಆಧಾರಿತ HiOS 11.0 ಸಪೋರ್ಟ್ನೊಂದಿಗೆ ಕೆಲಸ ನಿರ್ವಹಿಸಲಿದೆ.
ಹಾಗೆಯೇ 2GB RAM ಮತ್ತು 2GB ವಿಸ್ತರಿಸಬಹುದಾದ ವರ್ಚುವಲ್ RAM +64GB ಮತ್ತು 3GB RAM ಮತ್ತು 3GB ವಿಸ್ತರಿಸಬಹುದಾದ ವರ್ಚುವಲ್ RAM + 64GB ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳನ್ನು ಪಡೆದಿದೆ.
ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್ ಮೈಕ್ರೋ ಸ್ಲಿಟ್ ಫ್ಲ್ಯಾಷ್ಲೈಟ್ನೊಂದಿಗೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.ಇದನ್ನು ಟಿಯರ್ ಡ್ರಾಪ್ ಕಟೌಟ್ ಸ್ಲಾಟ್ನಲ್ಲಿ ಇರಿಸಲಾಗಿದೆ.
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದಿದ್ದು, ಇದು 29 ದಿನಗಳ ಸ್ಟ್ಯಾಂಡ್ಬೈ ಸಮಯವನ್ನು ಒಳಗೊಂಡಿದೆ. ಇದರ ಜೊತೆಗೆ ಇನ್-ದಿ-ಬಾಕ್ಸ್ 10W ಟೈಪ್ C ಅಡಾಪ್ಟರ್ನೊಂದಿಗೆ ಪ್ಯಾಕ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ ಮತ್ತು ಬ್ಲೂಟೂತ್ 5.0 ಅನ್ನು ಸಪೋರ್ಟ್ ಪಡೆದಿದೆ.
ಇದಲ್ಲದೆ ಈ ಸ್ಮಾರ್ಟ್ಫೋನ್ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಇ-ದಿಕ್ಸೂಚಿ ಸೆನ್ಸಾರ್ಗಳನ್ನು ಒಳಗೊಂಡಿದೆ.