ಹೈದಾರಾಬಾದ್: ತೆಲಂಗಾಣದಲ್ಲಿ (Telangana) ಕಾಂಗ್ರೆಸ್ಗೆ (Congress) ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ (Revanth Reddy) ನಿವಾಸದಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ. ಬೆಳಗ್ಗೆ 10:15ರ ಟ್ರೆಂಡ್ ಪ್ರಕಾರ ಬಿಆರ್ಎಸ್ 50,
ಕಾಂಗ್ರೆಸ್ 60, ಬಿಜೆಪಿ 3, ಎಐಎಂಐಎಂ 5 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಒಟ್ಟು 119 ಸ್ಥಾನಗಳಿದ್ದು ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದೆ. ತೆಲಂಗಾಣದಲ್ಲಿ 2018 ರ ಚುನಾವಣೆಯಲ್ಲಿ ಬಿಆರ್ಎಸ್ 88 ಸೀಟ್ಗಳನ್ನು ಗೆದ್ದಿತ್ತು. ಕಾಂಗ್ರೆಸ್ 19, ಎಐಎಂಐಎಂ 7, ಟಿಡಿಪಿ 2 ಸ್ಥಾನಗಳನ್ನು ಗೆದ್ದಿದ್ದವು. ಬಿಜೆಪಿ ಒಂದು ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿತ್ತು.