ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳಲ್ಲಿ ‘ಅಕ್ರಮ ನಡೆದಿದೆ’ ಎಂಬ ಕುರಿತಂತೆ ರಾಜ್ಯ ಸರ್ಕಾರ ರಚಿಸಿದ ತನಿಖಾ ತಂಡದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಮಧ್ಯಂತರ ವರದಿ ಸಲ್ಲಿಕೆಯಾಗಲಿದೆ .
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದ 2019-20ರಿಂದ 2022-23ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ₹2 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸಲು ಐಎಎಸ್ ಅಧಿಕಾರಿ ಆದಿತ್ಯ ಆಮ್ಲನ್ ಬಿಸ್ವಾಸ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.
ಈ ತಂಡವು ಸದ್ಯ 230ಕ್ಕೂ ಹೆಚ್ಚಿನ ಕಾಮಗಾರಿಗಳ ದಾಖಲೆಗಳ ಪರಿಶೀಲನೆಯನ್ನು ನಡೆಸಿದ್ದು, ತನಿಖಾ ತಂಡದ ಪರಿಶೋಧನೆ ವೇಳೆ ಕಾಮಗಾರಿ ಅನುಷ್ಠಾನದಲ್ಲಿ ಹಲವು ಲೋಪಗಳು, ಅಕ್ರಮಗಳು ಪತ್ತೆಯಾಗಿದೆ. ಈ ವಿಚಾರವನ್ನು ಕಳೆದ ನ.7ರಂದು ನಡೆದ ತನಿಖಾ ತಂಡದ ಪರಿಶೀಲನಾ ಸಭೆಯಲ್ಲಿ ಸ್ವತಃ ಆದಿತ್ಯ ಆಮ್ಲನ್ ಬಿಸ್ವಾಸ್ ಅವರೇ ತಿಳಿಸಿದ್ದು, ಶೀಘ್ರದಲ್ಲೆ ಕೆಲ ಕಾಮಗಾರಿಗಳ ಕುರಿತಂತೆ ಮಧ್ಯಂತರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ತನಿಖಾ ತಂಡದ ಇತರ ಅಧಿಕಾರಿಗಳಿಗೆ ಸೂಚಿಸಲಾಗಿದೆ.