ಕಲಬುರ್ಗಿ:- ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರಧ್ವಜ ಇಟ್ಟು ಅಪಮಾನ ಮಾಡಿದ ಹಿನ್ನೆಲೆ 6 ಮಂದಿ ವಿರುದ್ಧ ಕೇಸ್ ದಾಖಲಾಗಿದೆ.
ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಗೌರಕ್ಕೆ ಅವಮಾನ ತಡೆಗಟ್ಟುವ ಕಾಯ್ದೆ 1971 ಯು/ಎಸ್ 2 ಅಡಿಯಲ್ಲಿ ಮೊಹಮ್ಮದ್ ಅಫ್ಜಲುದ್ದೀನ್ ಜುನೈದಿ, ಮೊಹಮ್ಮದ್ ಕಿವಾಮೊದ್ದಿನ್ ಜುನೈದಿ, ತಾಹಿರ್ ಅಲ್ಲಾವುದ್ದಿನ್ ಜುನೈದಿ, ಫಕ್ರುದ್ದಿನ್ ಮಣಿಯಾಲ್, ರಿಜ್ವಾನ್ ಅಹ್ಮದ್ ಮತ್ತು ಮೌಲಾನ್ ಅಹ್ಮದ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಶುಕ್ರವಾರದಂದು ಇಲ್ಲಿನ ಶೇಖ್ ದರ್ಗಾದಲ್ಲಿ ಜುನೈದಿ ಎಂಬುವರ ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು. ಹುಟ್ಟು ಹಬ್ಬ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಈ ವೇಳೆ ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರಧ್ವಜ ಇಟ್ಟು ಆರೋಹಣ ಮಾಡಲಾಗಿತ್ತು. ಈ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ ಕೇಳಿಬಂದಿತ್ತು.
ಈ ಸಂಬಂಧ ದೂರು ಆಧರಿಸಿ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.