ಮೈಸೂರು:- ನಗರದ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಜರುಗಿದೆ.
ಬೆಂಗಳೂರು – ಮಂಗಳೂರು ಹೈವೇಯಲ್ಲಿ ಬಾನುವಾರ ಸರಣಿ ಅಪಘಾತ: ಜಖಂಗೊಂಡ 7 ಕಾರುಗಳು!
ಚೇತನ್ (45), ರೂಪಾಲಿ (43), ಸೇರಿ ಇಬ್ಬರು ಮಕ್ಕಳು ಮೃತರು. ಹೆಂಡ್ತಿ, ಮಕ್ಕಳಿಗೆ ವಿಷ ನೀಡಿ ಗಂಡ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳಿದವರ ಮೃತದೇಹಗಳು ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು ಬಿಗಿದುಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಜಾನ್ಹವಿ, ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.