ಪಾಟ್ನಾ:– ದೇಶವನ್ನೇ ಬೆಚ್ಚಿ ಬೀಳಿಸಿದ ಈ ಘಟನೆ ಬಿಹಾರದಲ್ಲಿ ನಡೆದಿದೆ. ಹೆಂಡ್ತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಆಕೆ, ತಮ್ಮ ಇಬ್ಬರು ಮಕ್ಕಳು, ತಾಯಿಯನ್ನು ಕತ್ತು ಕೊಯ್ದು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯಕ್ಕೆ ಯತ್ನ, ದೂರು ದಾಖಲು!
ಮೃತರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನೀತು ಕುಮಾರಿ ಅವರ ಕುಟುಂಬ ಎಂದು ಗುರುತಿಸಲಾಗಿದೆ.
ಬಿಹಾರದ ಭಾಗಲ್ಪುರ ಜಿಲ್ಲೆಯ ಪೊಲೀಸ್ ಲೈನ್ನಲ್ಲಿ ಈ ಘಟನೆ ನಡೆದಿದ್ದು ಪತ್ನಿ ನೀತು ಕುಮಾರಿ, ಮಕ್ಕಳಾದ 4 ವರ್ಷದ ಸಿಬು ಮತ್ತು 3 ವರ್ಷದ ಶ್ರೇಯಾ, ತಾಯಿಯನ್ನು ಕೊಂದ ಬಳಿಕ ಪಂಕಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೀತು ಕುಮಾರಿ ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಜಗಳವಾಡಿದ ಬಳಿಕ ಪಂಕಜ್ ಈ ಕೃತ್ಯ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಪಂಕಜ್ ಬರೆದ ಡೆತ್ ನೋಟ್ ಕೂಡ ಲಭಿಸಿದೆ ಎಂದು ತಿಳಿದು ಬಂದಿದೆ.
ಪಂಕಜ್ ಬರೆದ ಡೆತ್ನೋಟ್ ಅನ್ನು ಪೊಲೀಸರು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಪಂಕಜ್, ಆತ್ಮಹತ್ಯೆಗೂ ಮುನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ತಾಯಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಭಾಗಲ್ಪುರ್ ಉಪ ಪೊಲೀಸ್ ಮಹಾನಿರೀಕ್ಷಕ ವಿವೇಕಾನಂದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.