ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದ್ದು ಜೀವನೋಪಾಯಕ್ಕೆ ಸಾಕಿದ್ದ ಕೋಳಿಗಳ ಸಹಿತ ದವಸ ಧಾನ್ಯ ಸುಟ್ಟು ಕರಕಲಾಗಿವೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಫಡತರವಾಡಿ ಗ್ರಾಮದ ಮಹಾದೇವ ದೇವಖಾತೆ ಎಂಬುವವರ ಗುಡಿಸಲಿಗೆ ನಿನ್ನೆ ರಾತ್ರಿ 8 ಘಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಚಾಣಕ್ಯನ ಪ್ರಕಾರ ಹೆಂಡತಿ ತನ್ನ ಗಂಡನ ಈ ಕೆಟ್ಟ ಅಭ್ಯಾಸಗಳನ್ನು ಮುಚ್ಚಿಡಬಾರದು..!
ತಕ್ಷಣ ಸ್ಥಳೀಯರ ಮಾಹಿತಿ ಮೆರೆಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಅನಾಹುತದಲ್ಲಿ ನಗದು ಸಹಿತ ಬಹುತೇಕ ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ