ಬೆಂಗಳೂರು: ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ (BJP) ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಕರ್ನಾಟಕ ಬಿಜೆಪಿಯ (Karnataka BJP) 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು ನನ್ನನ್ನು ಅಧ್ಯಕ್ಷರಾಗಿ ನೇಮಿಸಿರುವ ರಾಷ್ಟ್ರೀಯ ವರಿಷ್ಠರಿಗೆ ಧನ್ಯವಾದ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾರಿಗೆ ಧನ್ಯವಾದ. ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷವು ಅಧ್ಯಕ್ಷರಾಗಿ ನೇಮಕ ಮಾಡಿದೆ.ಪಕ್ಷದ ಎಲ್ಲಾ ನಾಯಕರ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ನನಗೆ ನೀಡಿರುವ ಸ್ಥಾನದ ಬಗ್ಗೆ ಅರಿವು ಇದೆ, ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡದಂತೆ ಪಕ್ಷ ಸಂಘಟನೆ ಮಾಡುವೆ ಎಂದು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ. ಮುಂದೆ ಈ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದರು.
ಈ ಸರ್ಕಾರ ಶಾಸಕರ ಕ್ಷೇತ್ರಗಳಿಗೆ 1 ರೂ.ಕೂಡ ಅನುದಾನ ನೀಡುತ್ತಿಲ್ಲ. ಈ ವಿಚಾರವನ್ನು ಅವರದ್ದೇ ಪಕ್ಷದ ಶಾಸಕರೇ ಬಹಿರಂಗಪಡಿಸಿದ್ದಾರೆ. ಭ್ರಷ್ಟ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದರು.