ಮೈಸೂರು:- ಇಲ್ಲಿನ ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾನು ಕಳೆದ 2 ಚುನಾವಣೆಯಲ್ಲಿ ಪ್ರತಾಪ್ ಸಿಂಹ ಬೆಂಬಲಿಸಿದ್ದೆ. ಈಗಲೂ ಬೆಂಬಲಿಸುತ್ತೇನೆ. ಅವರಿಗೆ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದರು
ಟಿಕೆಟ್ ತಪ್ಪುತ್ತೆ ಎಂಬ ವಿಚಾರ ನಮಗೆ ಗೊತ್ತಿಲ್ಲ. ತುಳಿಸಿ ದಾಸಪ್ಪ ನಂತರ ಮೈಸೂರಿನಿಂದ ಒಕ್ಕಲಿಗರು ಸಂಸದರಾಗಿದ್ದಾರೆ. ಪ್ರತಾಪ್ ಸಿಂಹರಿಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು
ಇನ್ನೂ ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಕಳೆದ ಕೆಲ ದಿನಗಳಿಂದ ಯದುವೀರ್ ಒಡೆಯರ್ ಹೆಸರು ಕೇಳಿ ಬರುತ್ತಿದ್ದರೂ ಅದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿರಲಿಲ್ಲ. ಆದರೆ ಈಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್ ಒಡೆಯರ್ ಹೆಸರು ಪ್ರಸ್ತಾಪವಾಗಿದೆ