ಮೈಸೂರು:- ಹೈಕಮಾಂಡ್ಗೆ ಎಲ್ಲ ಹೇಳ್ತೇನೆ, ಆಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸೋಮಣ್ಣ ಹೇಳಿದ್ದಾರೆ.
ಕಾರ್ತಿಕ ಮಾಸ ಮುಗಿದು ಇದೀಗ ಧನುರ್ಮಾಸ ಆರಂಭವಾಗುತ್ತಿದೆ. ಸದ್ಯದಲ್ಲೇ ಮೂರ್ನಾಲ್ಕು ಮಂದಿ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸುತ್ತೇವೆ. ಹೈಕಮಾಂಡ್ ಭೇಟಿ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದರು. ಹೈಕಮಾಂಡ್ ಭೇಟಿ ವೇಳೆ ವಿಧಾನಸಭೆ ಚುನಾವಣೆಯಲ್ಲಿ ಏನೆಲ್ಲಾ ಬೆಳವಣಿಗೆ ಆಯಿತು ಎಂಬುದನ್ನು ಮನವರಿಕೆ ಮಾಡಿಕೊಡುತ್ತೇವೆ ಎಂದು ವಿವರಿಸಿದರು.
ಕೆಲವು ಬಿಜೆಪಿ ನಾಯಕರ ಸೋಲಿಗೆ ಹಿರಿಯ ನಾಯಕರೇ ನೇರ ಕಾರಣ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದ ವಿ. ಸೋಮಣ್ಣ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಏನು ಕಾರಣ ಎಂದು ಎಲ್ಲರಿಗೂ ಗೊತ್ತಿದೆ. ಪದೇಪದೆ ಅದೇ ವಿಚಾರ ಮಾತನಾಡುವುದು ಬೇಡ ಎಂದು ಹೇಳಿದರು.
ʻʻನಾನು ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ. ಆದರೆ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುತ್ತೇನೆʼʼ ಎಂದು ವಿ. ಸೋಮಣ್ಣ ಹೇಳಿದರು.