ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮೋದಿ ಇಲ್ಲದಿದ್ದರೆ ನಾನು ಏನು ಇಲ್ಲ, ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರತಪ್ ಸಿಂಹಾ!
ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆಂದು ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು ನನಗೆ ಗೊತ್ತಿಲ್ಲ. ಯದುವೀರ್ ಆಗುವುದು,ಮಾಧ್ಯಮವರು ಸೃಷ್ಟಿ ಮಾಡಿಕೊಂಡು ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ ಎಂದು ಕಿಡಿಕಾರಿದರು.
ತಾನು ಎಂಪಿಯಾದರೆ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ನೀಡಿ, ಎರಡು ಸಾರಿ ಎಂಪಿ ಆಗಿದ್ದಾರಲ್ಲ ನನ್ನ ಕುರ್ಚಿ ಅಲುಗಾಡಲೇ ಇಲ್ಲಾ, ಕ್ಯಾಂಡಿಡೇಟ್ ಯಾರದಾರೂ ಆಗಲಿ ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು.