ನವದೆಹಲಿ: ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ, ಪಕ್ಷದ ತಿರ್ಮಾನವೇ ಅಂತಿಮ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ನಮ್ಮಲ್ಲಿ ಹಿರಿಯ ನಾಯಕರಿದ್ದಾರೆ.
ಅವರ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಪಕ್ಷ ಇದ್ದರೆ ನಿಖಿಲ್ ಕುಮಾರಸ್ವಾಮಿ. ಪಕ್ಷಕ್ಕೆ ಸಾವಿರಾರು ಕಾರ್ಯಕರ್ತರನ್ನು ಹುಟ್ಟು ಹಾಕುವ ಶಕ್ತಿ ಇದೆ. ಹೀಗಾಗೀ ಪಕ್ಷದ ತಿರ್ಮಾನವೇ ಅಂತಿಮ ಎಂದರು.
ನಿಮಗೆ ಗೊತ್ತೆ..? ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಈ ಎಲೆಯಲ್ಲಿದೆ ಪರಿಹಾರ.!
ಉಪಚುನಾವಣೆ ಬಳಿಕ ನಾನು ಕೈಕಟ್ಟಿ ಕೂತಿಲ್ಲ. ರೈತರ ನಿಯೋಗದೊಂದಿದೆ ದೆಹಲಿಗೆ ಬಂದಿದ್ದೇನೆ. ತಂಬಾಕು ಬೆಳೆಗಾರರ ಸಮಸ್ಯೆಗಳ ಕೇಂದ್ರ ಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇದೇ ಅವಧಿಯಲ್ಲಿ ಗೃಹ ಸಚಿವ ಅಮಿತ್ ಶಾ, ಉಸ್ತುವಾರಿ ರಾಧಮೋಹನ್ ಸಿಂಗ್,
ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದೇನೆ. ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆಗಳಲ್ಲಿ ಒಟ್ಟಾಗಿ ಹೋಗುವ ಬಗ್ಗೆ ಚರ್ಚೆ ಮಾಡಿದ್ದೇನೆ. ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ಗೊತ್ತಿರುವ ಹಿನ್ನೆಲೆ ಆ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದರು.