ಬೆಂಗಳೂರು:- ನಿಗಮ ಮಂಡಳಿ ಬೇಡವೆಂದು ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕ ಪತ್ರ ಬರೆದಿದ್ದಾರೆ.
ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಹೀಗಾಗಿ ನನ್ನನ್ನು ಪರಿಗಣಿಸಬೇಡಿ ಎಂದು ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ನನ್ನನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ. ಕಾಂಗ್ರೆಸ್ ಪಕ್ಷ ನನಗೆ ಮೂರು ಬಾರಿ ಸ್ಪರ್ಧೆಗೆ ಅವಕಾಶ ನೀಡಿದೆ. ಕ್ಷೇತ್ರದ ಜನ ನಿರಂತರವಾಗಿ ನನಗೆ ಆಶೀರ್ವದಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಆದ್ರೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ. ನಾನು ಪಕ್ಷಕ್ಕೆ ಮುಜುಗರ ಆಗದಂತಿರಲು ಯತ್ನಿಸಿದ್ದೇನೆ. ಇನ್ಮುಂದೆ ಸಹ ಪಕ್ಷಕ್ಕೆ ಮುಜುಗರ ಆಗದಂತೆ ಇರುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಸಹಕಾರ ನಿರೀಕ್ಷಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.