ಬೆಂಗಳೂರು:-ನಾನು ಸುಮ್ಮನೆ ಕುಳಿತುಕೊಳ್ಳೋ ಮಗನಲ್ಲ ಎಂದು ಹೇಳುವ ಮೂಲಕ ಸೋಲಿನ ಬಗ್ಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಮಾತುಗಳನ್ನಾಡಿದ್ದಾರೆ.
ಮುಂದಿನ ಸಲ ಯತ್ನಾಳ್ ಸೋಲದಿದ್ರೆ ಮಠ ತ್ಯಾಗ ಮಾಡುತ್ತೇನೆ: ಹುಲಸೂರು ಶ್ರೀ ಸವಾಲ್!
ಚುನಾವಣೆಯಲ್ಲಿ ಸೋತಿದ್ದೀನಿ ಅಷ್ಟೇ, ಆದ್ರೆ ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ನಡೆಸುತ್ತೇನೆ ಎಂದರು.
ಕಾರ್ಯಕರ್ತರುಗಳು ನಮ್ಮ ಆಧಾರಸ್ತಂಭಗಳು. ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸವನ್ನು ಹೊಂದಿದ್ದೇನೆ ಎಂದರು.
2019 ರಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವವರ ಬಗ್ಗೆ ನಾನು ಎಂದಿಗೂ ಹಗುರವಾಗಿ ಮಾತನಾಡಿಲ್ಲ. ನಾನು ಯುವಕನಾಗಿದ್ದೇನೆ. ಯುವ ಸಮುದಾಯದ ಪೀಳಿಗೆಗೆ ನನ್ನದೇ ಆದ ಕೊಡುಗೆ ನೀಡಬೇಕೆನ್ನುವುದು ನನ್ನ ಆಶಯ ಎಂದು ತಿಳಿಸಿದರು.
ನಾವು ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಿದ್ಧರಾಗಬೇಕು. ನನಗೆ ಕೇವಲ 36 ವರ್ಷ. ನನಗಿದು ಚಿಕ್ಕ ವಯಸ್ಸು. ದಯವಿಟ್ಟು ನನ್ನನ್ನು ಬಳಸಿಕೊಳ್ಳಿ, ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದರು.