ರಾಮನಗರ: ಚನ್ನಪಟ್ಟಣಕ್ಕೆ ನಾನೇ ಶಾಸಕ ನಾನೇ ಮಂತ್ರಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಚನ್ನಪಟ್ಟಣಕ್ಕೆ ಈಗ ಶಾಸಕರು ಇಲ್ಲ. ಹೀಗಾಗಿ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ ಎಂದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪುತ್ರ ಭಾಗಿ!?.. ನಗರಾಭಿವೃದ್ಧಿ ಸಚಿವ ಹೇಳಿದಿಷ್ಟು!
ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ, ನೀತಿ ನೋಡಿ ಕೆಲಸ ಮಾಡಿದ್ದೇನೆ. ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.
ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ. ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ. ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ್ದೀರಿ ಅದಕ್ಕೆ ನಾನು ಕೃತಜ್ಞ ಎಂದು ತಿಳಿಸಿದ್ರು