ರಾಮನಗರ:- ಕಳ್ಳರು, ಸುಳ್ಳರು ಒಂದಾಗಿದ್ದಾರೆ, ನನಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೀವನ ಏನೆಂಬುದು ತಿಳಿದಿದೆ. ದೇಶದ ವ್ಯವಸ್ಥೆಯಲ್ಲಿ ಕಳ್ಳರು ಹಾಗೂ ಸುಳ್ಳರು ಒಂದಾಗಿದ್ದಾರೆ. ಮೇಲೊಬ್ಬ ಭಗವಂತ ಎಂಬುವವನಿದ್ದಾನೆ. ಅವನೇ ಅಂತಿಮವಾಗಿ ಎಲ್ಲಾ ತೀರ್ಮಾನ ತೆಗೆದುಕೊಳ್ಳುತ್ತಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದರು.
ಸಮಾಜದಲ್ಲಿ ಹಣದ ಮದ ಹತ್ತಿಸಿಕೊಂಡವರು ಎಲ್ಲವನ್ನೂ ಕೊಂಡುಕೊಳ್ಳುತ್ತೇನೆ ಎಂದುಕೊಂಡಿದ್ದಾರೆ. ಆದರೆ ಎಲ್ಲದಕ್ಕೂ ಒಂದು ಅಂತ್ಯವೆಂಬುದು ಇದ್ದೇ ಇರುತ್ತದೆ ಎಂದು ತಿರುಗೇಟು ನೀಡಿದರು.
ನನ್ನ ವಿರುದ್ಧ ಯಾರು ಬೇಕಾದರೂ ಪೋಸ್ಟರ್ ಅಂಟಿಸಿಕೊಳ್ಳಲಿ, ಬೇಡ ಎನ್ನುವುದಿಲ್ಲ. ನನಗೆ ಯಾರು ಏನೂ ಮಾಡಲು ಸಾಧ್ಯವಾಗುವುದಿಲ್ಲವೆಂದು ತಮ್ಮ ವಿರುದ್ಧದ ಪೋಸ್ಟರ್ ವಾರ್ ವಿಚಾರವಾಗಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.
ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೇ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ವಿರುದ್ಧ ನಾನು ಧ್ವನಿ ಎತ್ತಿದೆ. ಇಲ್ಲಿವರೆಗೆ ನಾನು ಏನು ಹೇಳಿದ್ದೇನೋ ಅದರಲ್ಲಿ ಒಂದಕ್ಕೂ ಸರ್ಕಾರ ಉತ್ತರ ಕೊಟ್ಟಿಲ್ಲ ಎಂದರು.