ನಾಳೆ ಅಂದರೆ ಜ.8ರಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಬಿಗ್ ಅಪ್ ಡೇಟ್ ನೀಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ. ಇದೀಗ ನಟ ರಿಷಬ್ ಶೆಟ್ಟಿ ತಾನು ಕೂಡ ಟಾಕ್ಸಿಕ್ ಸಿನಿಮಾಗಾಗಿ ಕಾಯ್ತಿರೋದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ಟಾಕ್ಸಿಕ್’ ಸಿನಿಮಾ ಅಪ್ಡೇಟ್ಗಾಗಿ ನಾನು ಕಾಯುತ್ತಿದ್ದೇನೆ ಎಂದು ರಿಷಬ್ ಶೆಟ್ಟಿ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಕಾಯುತ್ತಿದ್ದೇನೆ ಎಂದು ಲವ್ಲಿ ಇಮೋಜಿ ಹಾಕಿ ‘ಟಾಕ್ಸಿಕ್’ ಕುರಿತು ನಟ ಪ್ರತಿಕ್ರಿಯೆ ನೀಡಿದ್ದಾರೆ.
‘ಕೆಜಿಎಫ್ 2’ ಬಳಿಕ ಯಶ್ ಅವರು ನಿರ್ದೇಶಕಿ ಗೀತು ಮೋಹನ್ದಾಸ್ ಜೊತೆ ಕೈಜೋಡಿಸಿದ್ದಾರೆ. ಯಶ್ ಜೊತೆ ಕೆವಿಎನ್ ಸಂಸ್ಥೆ ಕೂಡ ಕೈಜೋಡಿಸಿದೆ. ಜ.8ರಂದು ಬೆಳಗ್ಗೆ 10:25ಕ್ಕೆ ಟಾಕ್ಸಿಕ್ ಬಿಗ್ ಅಪ್ಡೇಟ್ ಹೊರಬೀಳಲಿದೆ. ನಟನ ಲುಕ್ ಅನಾವರಣ ಆಗಲಿದೆ. ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ.