ದೆಹಲಿ:- ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸದಸ್ಯ ಸುರೇಶ್ ಅವರು ದಕ್ಷಿಣ ರಾಜ್ಯಗಳನ್ನು ಒಳಗೊಂಡ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಟ್ಟಿದ್ದರು. ಈ ಹೇಳಿಕೆಯು ಸಂವಿಧಾನ ಮತ್ತು ಅದರ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ.
ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಈ ವಿಷಯವನ್ನು ಲೋಕಸಭೆಯ ನೈತಿಕ ಸಮಿತಿಗೆ ಉಲ್ಲೇಖಿಸಬೇಕೆಂದುಒತ್ತಾಯಿಸುತ್ತೇನೆ ಎಂದಿದ್ದಾರೆ. ಸೋನಿಯಾ ಗಾಂಧಿಯವರು ಕ್ಷಮೆಯಾಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಇದು ಸಂಸದರಾಗಿ ಪ್ರಮಾಣ ವಚನದ ಉಲ್ಲಂಘನೆಯಾಗಿದೆ. ಈ ವಿಷಯವನ್ನು ನೈತಿಕ ಸಮಿತಿಗೆ ಕಳುಹಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು. ಅವರು ಮಾಡದಿದ್ದರೆ ನೀವೂ ದೇಶದ ತುಕಡೇ ತುಕಡೆಯಲ್ಲಿ ಭಾಗಿಯಾಗಿದ್ದೀರಿ ಎಂದು ದೇಶ ನಂಬುತ್ತದೆ.
ಜೋಶಿ ಅವರು ಸದನದಲ್ಲಿ ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳ ಇಂಡಿಯಾ ಬ್ಲಾಕ್ನ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಲು ಪ್ರಯತ್ನಿಸಿದರು. ಸ್ವಲ್ಪ ಸಮಯದ ನಂತರ ಅವರು ಹೊರನಡೆದರು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನದ ಮೇಜಿನ ಮೇಲೆ ಸಂಸದೀಯ ಪತ್ರಗಳನ್ನು ಮಂಡಿಸಿದ ನಂತರ ಅಭಿಪ್ರಾಯವನ್ನು ವ್ಯಕ್ತಪಡಿಸಲು ವಿರೋಧ ಪಕ್ಷದ ಸದಸ್ಯರನ್ನು ಕರೆದರು
ಅವರು ಕಲಾಪವನ್ನು ಬಹಿಷ್ಕರಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸ್ಪೀಕರ್ ಖಾಲಿಯಾಗಿರುವ ವಿರೋಧ ಪಕ್ಷದ ಸೀಟುಗಳನ್ನು ನೋಡಿ ಟೀಕಿಸಿದರು.