ಕೋಲಾರ: ರಾಜ್ಯದ ಜನ ಕಾಂಗ್ರೆಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಸರ್ಕಾರ ಬೀಳುತ್ತೆ ಅನ್ನೋದನ್ನ ನಾನು ಒಪ್ಪಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಆ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡಿಯಲಿ ಬಿಡಿ. ಇನ್ನೂ ಯಾವುದೇ ಆಪರೇಷನ್ ಕಮಲ ಮಾಡುವುದಕ್ಕೆ ಹೋಗುವುದಿಲ್ಲ, ಬಹುಮತದೊಂದಿಗೆ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ನುಡಿದಿದ್ದಾರೆ.