ಬೆಂಗಳೂರು:- HDK ಕೇಂದ್ರ ಸಚಿವನಾಗುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಎಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಆ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸ್ಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ ಅವರ ಆಯಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸ್ಸಿನಲ್ಲಿ ಏನು ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ, ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.