ಶಿವಮೊಗ್ಗ:- ಯಾರೇನೇ ಹೇಳಿದರೂ ರಾಜ್ಯಾಧ್ಯಕ್ಷನಾಗಿ ಜನ ನನ್ನ ಒಪ್ಪಿದ್ದಾರೆ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ.
ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆ ಮುರಿಯುವ ಬಗ್ಗೆ ಆರ್. ಅಶ್ವಿನ್ ಮಾತು..!
ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ನಾನು ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದು ಅಸಮಾಧಾನ ಹೊರಹಾಕಿದ್ದರು.
ಯಾರು ಏನೇ ಮಾತನಾಡಿದರೂ ವಿಜಯೇಂದ್ರನಾದ ನಾನೇ ರಾಜ್ಯಾಧ್ಯಕ್ಷ ಎಂಬುದಂತೂ ಸತ್ಯ. ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪಕ್ಷದ ಹೈಕಮಾಂಡ್. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷ ಎಂದು ಘೋಷಿಸಿದವರು ಎಂದು ಬಿ.ವೈ ವಿಜಯೇಂದ್ರ ಹೇಳಿದರೂ.
ಇದೇ ವೇಳೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದಿದೆ. ಪೆಟ್ರೋಲ್ ಬಾಂಬ್ ಹಾಕಿ ಅಂಗಡಿಗಳನ್ನ ಸುಟ್ಟು ಹಾಕಿದ್ದಾರೆ. ಪಾಂಡವಪುರದಲ್ಲಿನ ಆರ್ಎಸ್ಎಸ್ ಕಚೇರಿ ಮೇಲೆ ಪೊಲೀಸರ ದಾಳಿ ನಡೆದಿದೆ. ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸರು ಹೀಗೆ ಮಾಡುತ್ತಿದ್ದಾರೆ. ಇದು ರಣಹೇಡಿ ಸರ್ಕಾರ ಎಂದು ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.