ಬೆಂಗಳೂರು: ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗೆ ಇಲ್ಲ. ಯತ್ನಾಳ್ ಏನು ಎಂದು ಎಲ್ಲರಿಗೂ ಗೊತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮಗೆ ಹೊಸ ವರ್ಷ ಯುಗಾದಿ. ವಿಜಯೇಂದ್ರ ಅವರಿಗೆ ಯಾವುದು ಹೊಸ ವರ್ಷ ಎಂದು ನನಗೆ ಗೊತ್ತಿಲ್ಲ.
ಪಕ್ಷದಿಂದ ನನ್ನ ಉಚ್ಚಾಟನೆ ಆಗುವುದಿಲ್ಲ. ಉಚ್ಚಾಟನೆ ಎನ್ನುವುದು ಮಾಧ್ಯಮಗಳು ಸೃಷ್ಟಿ ಮಾಡಿರುವುದು. ನನ್ನನ್ನ ಯಾಕೆ ಉಚ್ಚಾಟನೆ ಮಾಡುತ್ತಾರೆ? ನಾನು ಯಾರ ಜೊತೆಯೂ ಅಡ್ಜೆಸ್ಟ್ಮೆಂಟ್ ಮಾಡಿಕೊಂಡಿಲ್ಲ.
ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ!
ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಜೊತೆ ನನ್ನ ಅಡ್ಜೆಸ್ಟ್ಮೆಂಟ್ ಇಲ್ಲ. ವಿಜಯೇಂದ್ರಗೆ ದೆಹಲಿ ನಾಯಕರು ಪದೇ ಪದೇ ಅಪಾಯಿಟ್ಮೆಂಟ್ ಕೊಡುತ್ತಿದ್ದಾರೆ ಅದಕ್ಕೆ ಹೋಗುತ್ತಾರೆ. ಆದರೆ ನಾವು ಯಾರ ಅಪಾಯಿಟ್ಮೆಂಟ್ ಕೇಳಿಲ್ಲ. ನಾವು ಯಾರ ಮೇಲೂ ದೂರು ಕೊಡುವುದಿಲ್ಲ.
ನಮ್ಮದು ಜನರ ಆಂದೋಲ. ನಮ್ಮದು ದಿಲ್ಲಿ ಆಂದೋಲ ಅಲ್ಲ. ನನ್ನಂತ ಪಕ್ಷ ನಿಷ್ಠ ಯಾರು ಇಲ್ಲ. ನಾನು ಕಾಂಗ್ರೆಸ್ ಭಿಕ್ಷೆಯಿಂದ ಶಾಸಕನಾಗಿಲ್ಲ, ನಾನು ಹಿಂದೂಗಳಿಂದ ಬಿಜೆಪಿಯಿಂದ ಶಾಸಕ ಆಗಿರೋದು. ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗೆ ಇಲ್ಲ. ಯತ್ನಾಳ್ ಏನು ಎಂದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.