ಬೆಂಗಳೂರು, ಜೂನ್ 01:“ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
Chanakya Exit Poll: ಲೋಕಸಭೆ ಚುನಾವಣೆ ಅಂತ್ಯ.. ಯಾರಿಗೆ ಸಿಗಲಿದೆ ಬಹುಮತ!?
ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ:
“ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ.
ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.”