ಬೆಳಗಾವಿ: ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್ಗೆ ಹಾಜರು ಮಾಡುವಂತೆ ನಾನು ಪೊಲೀಸರಿಗೆ ಹೇಳಿದ್ದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರ ನಿರ್ದೇಶನದ ಮೇರೆಗೆ ಸಿಟಿ ರವಿ ಅವರನ್ನ್ಉ ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೋ ನನಗೆ ಗೊತ್ತಿಲ್ಲ. ಆದರೆ ಸಿಟಿ ರವಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದಾರೆ.
ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್ಗೆ ಹಾಜರು ಮಾಡುವಂತೆ ನಾನು ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೆಲ್ಲ ಸಮಸ್ಯೆ ಆಗುತ್ತಿರಲಿಲ್ಲ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಮೊದಲ ಘಟನೆ ಇದು. ಹೀಗಾಗಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ ಎಂದರು.
Free Gas: ಮಹಿಳೆಯರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಉಚಿತ `ಗ್ಯಾಸ್ ಸಿಲಿಂಡರ್’.! ಹೀಗೆ ಅರ್ಜಿ ಸಲ್ಲಿಸಿ
ನನ್ನನ್ನು ಪೊಲೀಸರು ಎನ್ಕೌಂಟರ್ ಮಾಡೋ ಸಂಚು ರೂಪಿಸಿದ್ರು’ ಎಂಬ ಸಿ.ಟಿ ರವಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿಟಿ ರವಿ ಓರ್ವ ವಿಧಾನ ಪರಿಷತ್ ಸದಸ್ಯ, ಅವರನ್ನು ಹೇಗೆ ಎನ್ಕೌಂಟರ್ ಮಾಡಲು ಸಾಧ್ಯ? ಸಿಟಿ ರವಿಗೆ ತೊಂದರೆ ಕೊಡಬೇಕು ಎಂದು ನಾವು ಠಾಣೆಯಿಂದ ಠಾಣೆಗೆ ಸುತ್ತಾಡಿಸಿಲ್ಲ. ಹೋದ ಎಲ್ಲ ಕಡೆಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಲು ಶುರು ಮಾಡಿದ್ರು. ಹೀಗಾಗಿ ಠಾಣೆಯಿಂದ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಸಮರ್ಥಿಸಿಕೊಂಡರು.