ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯಿಂದ ವಾಪಸ್ ಆದ ಬಳಿಕ ಹೆಚ್ಡಿಕೆ, ಬಿಜೆಪಿ ನಾಯಕರ ಭೇಟಿ ಮಾಡಿದ್ದೇವೆ. ಮೂರು ಸೀಟು ಕೇಳಿದ್ದೇವೆ, ತೆಗೆದುಕೊಳ್ತೀವಿ. ಚುನಾವಣೆಗೆ ಎಲ್ಲಾ ರೆಡಿಯಾಗಿದ್ದೀವಿ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಅದನ್ನು 25ರ ನಂತರ ಹೇಳ್ತೀನಿ. ನನಗೆ ಆರೋಗ್ಯ ಸಮಸ್ಯೆ ಇದೆ.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಚಿಕಿತ್ಸೆ ನಂತರ ಮಾತಾಡ್ತೀನಿ ಎಂದು ಮಾತನಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಶನಿವಾರ ಭೇಟಿಯಾಗಿದ್ದರು. ಮೈತ್ರಿ ಟಿಕೆಟ್ ಅಂತಿಮಗೊಳಿಸುವ ವಿಚಾರವಾಗಿ ಭೇಟಿ ಮಾಡಿದ್ದರು ಎನ್ನಲಾಗಿತ್ತು. ಹೆಚ್ಡಿಕೆಗೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಸಾಥ್ ನೀಡಿದ್ದರು.