ಬೆಂಗಳೂರು:– ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲ ನನ್ನ ನಂಬಿಕೆ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೈಜೈಟ್ಸ್ @ ಬೀಬಲ್ ಡಾಟ್ ಕಾಂ ಅನ್ನೋ ಮೇಲ್ ಐಡಿಯಿಂದ ಮೆಸೇಜ್ ಬಂದಿದೆ. ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿದ್ದೀವಿ, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಮೆಸೇಜ್ ಬಂದಿದೆ.
ಇದನ್ನ ನಾವು ಬಹಳ ಗಂಭೀರವಾಗಿ ಪರಿಶೀಲಿಸುತ್ತಿದ್ದೇವೆ. ಮೇಲ್ನ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಕಮಿಷನರ್ಗೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಎಲ್ಲಾ ಶಾಲೆಗಳನ್ನ ಪರಿಶೀಲನೆ ಮಾಡುವಂತೆ ತಾಕೀತು ಮಾಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲವೆಂಬುವುದ ನನ್ನ ನಂಬಿಕೆ. ಯಾವ ಉಗ್ರ ಸಂಘಟನೆ ಮಾಡಿದೆ, ಯಾರು ಇದನ್ನೆಲ್ಲಾ ಮಾಡಿದ್ದಾರೆ ಅನ್ನೋ ಪರಿಶೀಲಿಸುತ್ತಿದ್ದೇವೆ. ಅವರು ಭಾರತದವರೇ ಆಗಿದ್ದರೇ ಅಂತವರಿಗೆ ಏನು ಮಾಡಬೇಕು ಅಂತ ಭಾರತ ಸರ್ಕಾರದ ಜೊತೆ ಮಾತನಾಡುತ್ತೇವೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯೇ ಕಳುಹಿಸಿದೆ ಅನ್ನೋದನ್ನ ಇನ್ನೂ ಹೇಳಲು ಆಗಲ್ಲ ಎಂದರು.