ಬೆಂಗಳೂರು:- ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರೋ ನೋಟಿಸ್ ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಂಭಮೇಳದಲ್ಲಿ ಕನ್ನಡಿಗರಿಗೆ ಇದೆಂಥಾ ಸ್ಥಿತಿ: ಊಟ, ನೀರಿಲ್ಲದೇ ಪರದಾಟ!
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಾರ್ವತಿಗೆ ಇಡಿ ನೋಟಿಸ್ ಕೊಟ್ಟಿರುವ ವಿಚಾರವಾಗಿ ಮಾತನಾಡಿದ ಅವರು, ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಮುಡಾ ಕೇಸ್ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು
ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು