ಬೆಳಗಾವಿ: ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ, ಅಧ್ಯಕ್ಷನಾಗಿ ಮಾಡಬೇಕಾದ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ. ಇದನ್ನು ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಶಾಸಕರೇ ಒಪ್ಪಿದ್ದಾರೆ. ಈ ಮೂಲಕ ನಾನು ಉತ್ತರ ಕರ್ನಾಟಕದ ನಾಯಕರೂ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ತೋರಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
MP Renukacharya: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ ವಾಗ್ದಾಳಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆದಿರುವುದು ಸಮಾಧಾನ ತಂದಿದೆ. ಮೂರು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೂ ಈ ಭಾಗಕ್ಕೆ ಅನ್ಯಾಯವಾಗಿರುವುದು ಮನದಟ್ಟಾಗಿದೆ. ಹೀಗಾಗಿ ಉತ್ತರ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಹಣ ಮಂಜೂರು ಮಾಡಿದ್ದಾರೆ.