ಕೋಲಾರ:- ಗೋಧ್ರಾ ರೀತಿ ಗಲಭೆ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು, ಗೋಧ್ರಾ ರೀತಿಯ ಮತ್ತೊಂದು ದುರಂತ ಸಂಭವಿಸಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹಂಚಿಕೊಂಡಿರುವ ವಿಷಯದ ಬಗ್ಗೆ ನನಗೆ ಮಾಹಿತಿಯಿಲ್ಲ. ಇಲಾಖೆಯ ಗಮನಕ್ಕೂ ಆ ವಿಚಾರ ಬಂದಿಲ್ಲ. ಹರಿಪ್ರಸಾದ್ ಅವರಿಗೆ ಗೊತ್ತಿರಬಹುದೇನೋ?’ ಎಂದರು.
ಅಯೋಧ್ಯೆ ವಿಚಾರವಾಗಿ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಗೋಧ್ರಾ ರೀತಿಯ ಮತ್ತೊಂದು ದುರಂತ ಸಂಭವಿಸಲಿದೆ ಎಂಬ ಹರಿಪ್ರಸಾದ್ ಹೇಳಿಕೆ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಹರಿಪ್ರಸಾದ್ ಯಾವ ಮಾಹಿತಿ ಆಧರಿಸಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಇದು ವೈಯಕ್ತಿಕ ಹೇಳಿಕೆ ಎಂದು ಅವರೇ ಹೇಳಿಕೊಂಡಿರುವಾಗ ಮತ್ತೆ ಇನ್ನೇನಿದೆ? ಸರ್ಕಾರಕ್ಕೆ ಯಾರೇ ಆಗಲಿ ಒಳ್ಳೆಯ ಸಲಹೆ ನೀಡಿದರೆ ಪಡೆದು ಸ್ವೀಕಾರ ಮಾಡಿ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.