ಕೋಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರವಾಗಿ, ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪೋಷಕರಿಗೆ ಕೋಲ್ಕತ್ತಾ ಪೊಲೀಸರು ಲಂಚ ನೀಡಿದ್ದರು ಎಂಬ ಆರೋಪವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಳ್ಳಿಹಾಕಿದ್ದಾರೆ. ಆ ರೀತಿಯ ಘಟನೆಯೇ ನಡೆದಿಲ್ಲ. ಇದು ಸರ್ಕಾರದ ವಿರುದ್ಧ ದೂಷಣೆ ಎಂದು ಪ್ರತಿಪಾದಿಸಿದ್ದಾರೆ.
ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ನಮಗೆ ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣವನ್ನು ನೀಡಿದರು. ಅದನ್ನು ನಾವು ತಕ್ಷಣ ನಿರಾಕರಿಸಿದ್ದೇವೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದರು.
ಗಡಿಬಿಡಿಯಲ್ಲಿ ಗರ್ಭ ನಿರೋಧಕ ಮಾತ್ರೆಯನ್ನು ಹೀಗೆಲ್ಲಾ ತಿನ್ಬೇಡಿ: ಇಲ್ಲದಿದ್ರೆ ಪ್ರಾಣಕ್ಕೆ ಆಪತ್ತು!
ಇದಕ್ಕೆ ತಿರುಗೇಟು ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಮೃತ ವೈದ್ಯೆಯ ಕುಟುಂಬಕ್ಕೆ ನಾನು ಯಾವತ್ತೂ ಹಣ ನೀಡಿಲ್ಲ. ಇದು ಅಪಪ್ರಚಾರವಲ್ಲದೆ ಬೇರೇನೂ ಅಲ್ಲ. ಹಣವು ಎಂದಿಗೂ ಜೀವನವನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ನಾನು ಪೋಷಕರಿಗೆ ಈ ಹಿಂದೆ ಹೇಳಿದ್ದೆ. ತಮ್ಮ ಮಗಳ ನೆನಪಿಗಾಗಿ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ಅವರು ಬಯಸಿದರೆ ಸರ್ಕಾರವು ಅವರ ಪರವಾಗಿ ನಿಂತಿದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.
ಪ್ರತಿಭಟನೆಯ ನಂತರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಲು ಮುಂದಾದರು. ಆದರೆ ದುರ್ಗಾ ಪೂಜೆಗೆ ಮುಂಚಿತವಾಗಿ ಕಾನೂನು ಮತ್ತು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ರಾಜೀನಾಮೆ ಅಂಗೀಕಾರಕ್ಕೆ ನಿರಾಕರಿಸಿದೆ. ಪೊಲೀಸ್ ಅಧಿಕಾರಿಗಳು ಲಂಚ ನೀಡುವ ಪ್ರಯತ್ನ ಇದೊಂದು ಹಸಿ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದರು.