ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್ ಇಸ್ ರಾಂಗ್ ಇನ್ ದ್ಯಾಟ್. ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು.
ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ಕ್ಕೆ ಮುಂದಿನ ಚಿತ್ರದ ಟೈಟಲ್ ಘೋಷಣೆ!
ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.