ಬೆಳಗಾವಿ: ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುವರ್ಣಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ.
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರ್ಕಾರದ ವರ್ಗೀಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದು ತಿಳಿಸಿದರು.